ಪತಿಯಿಂದಲೇ ಗೃಹಬಂಧನಕ್ಕೊಳಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಅಕ್ಕ ಪಡೆ ರಕ್ಷಿಸಿದ ಬಗ್ಗೆ ವರದಿಯಾಗಿದೆ.
ಬೆಳಗಾವಿಯ ಟಿಳಕವಾಡಿ ಪ್ರದೇಶದ ಮನೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ದಿಲ್ಲಿಯಿಂದ ಬಂದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಅವರ ನಿರ್ದೇಶನದಂತೆ ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಡಿ.ಪಿ.ನಿಂಬಾಳ್ಕರ್ ತಂಡದೊಂದಿಗೆ ಅಕ್ಕ ಪಡೆಯವರು ಸ್ಥಳ ಪತ್ತೆಹಚ್ಚಿದರು.
ಬಳಿಕ ಮನೆಯಲ್ಲಿ ಬಂಧನದಲ್ಲಿದ್ದ ಮಹಿಳೆ ಹಾಗೂ ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು. ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರಕ್ಷಿಸಲ್ಪಟ್ಟ ಮಹಿಳೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ನಂತರ ವಿಮಾನದ ಮೂಲಕ ತವರೂರಾದ ದಿಲ್ಲಿಗೆ ರವಾನಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.


















