tamanvi
ಅಪರಾಧ

‘ಮಂಚಕ್ಕೆ ಕೈ-ಕಾಲು ಕಟ್ಟಿ ಹಾಕಿ ಬೆಂಕಿ ಹಚ್ಚಿದೆ’ – ತಪ್ಪೊಪ್ಪಿಕೊಂಡ ಯುವತಿ! ಬೆಂಗಳೂರನ್ನೇ ನಡುಗಿಸಿದ ಬ್ಯಾಡರಹಳ್ಳಿ ಕೊಲೆ ರಹಸ್ಯ ಬಯಲು!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಭಯಾನಕ ವಿಚಾರಗಳು ಇದೀಗ ಹೊರಬರುತ್ತಿವೆ. ಸದ್ಯ ಆತನ ಪ್ರೇಯಸಿ ಪ್ರೇಮಾ ಪೊಲೀಸರ ವಶದಲ್ಲಿದ್ದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಕಿರಣ್ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ ಎಂದು ಆಕೆ ನೀಡಿರುವ ಹೇಳಿಕೆ ಕೇಳಿ ಖುದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಪೊಲೀಸರ ತನಿಖೆಯ ವೇಳೆ ದೊರೆತ ಮಾಹಿತಿ ಪ್ರಕಾರ, ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರೇಮಾಗೆ ಕಿರಣ್ ಪರಿಚಯವಾಗಿದ್ದ. ಈ ವರ್ಷದ ಫೆಬ್ರವರಿ 14ರ ‘ವ್ಯಾಲೆಂಟೈನ್ಸ್ ಡೇ’ ದಿನ ಪ್ರೇಮಾ ತನ್ನ ಪ್ರೀತಿಯನ್ನು ನಿವೇದಿಸಿದ್ದಳು. ಕಿರಣ್ ಕೂಡ ಒಪ್ಪಿಕೊಂಡಿದ್ದ. ಪ್ರಿಯಕರನಿಗಾಗಿ ಪ್ರೇಮಾ ಬರೋಬ್ಬರಿ 4.5 ಲಕ್ಷ ರೂಪಾಯಿ ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದಳು. ಕೊಲೆ ಕೃತ್ಯ ನಡೆದ ದಿನವೂ ಇಬ್ಬರೂ ಸೇರಿ ಬೈಕ್ ನೋಡಲು ಹೋಗಿದ್ದರು ಎನ್ನಲಾಗಿದೆ.

ಆದರೆ, ಇತ್ತೀಚೆಗೆ ಕಿರಣ್ ಪ್ರೇಮಾಳಿಂದ ಅಂತರ ಕಾಯ್ದುಕೊಳ್ಳಲು ಶುರು ಮಾಡಿದ್ದ. ಇದರಿಂದ ಮನನೊಂದಿದ್ದ ಪ್ರೇಮಾ, ಆತನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮೊದಲೇ ತೀರ್ಮಾನಿಸಿದ್ದಳು. ಅದಕ್ಕಾಗಿಯೇ ಪೆಟ್ರೋಲ್ ಮತ್ತು ಸೀಮೆಎಣ್ಣೆಯನ್ನು ಮೊದಲೇ ಖರೀದಿಸಿ ತಂದಿಟ್ಟುಕೊಂಡಿದ್ದಳು. ಮದುವೆ ವಿಚಾರವಾಗಿ ಮನೆಯಲ್ಲಿ ಮತ್ತೆ ಗಲಾಟೆ ಆರಂಭವಾದಾಗ, ಪ್ಲಾನ್ ಪ್ರಕಾರ ಕಿರಣ್‌ನನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದಾಳೆ.

ಸದ್ಯ ಬ್ಯಾಡರಹಳ್ಳಿ ಪೊಲೀಸರು ಈಕೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಹತ್ಯೆಗೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರೀತಿಯಲ್ಲಿ ಉಂಟಾದ ವೈಫಲ್ಯ ಇಷ್ಟೊಂದು ಭೀಕರ ಅಂತ್ಯ ಕಂಡಿರುವುದು ನಾಗರಿಕ ಸಮಾಜವನ್ನು ನಡುಗಿಸುವಂತೆ ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119