tamanvi
ಅಪರಾಧ

ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣ: ಸಿಐಡಿಗೆ ವರ್ಗಾವಣೆಯಾದ ತನಿಖೆಯ ಹೊಣೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ಪ್ರಕರಣವನ್ನು ರಾಜ್ಯ ಸರ್ಕಾರ ಇದೀಗ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾವಣೆ ಮಾಡಿದೆ.

maithri

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಮತ್ತು ಆಕೆಯ ಜ್ಯೂನಿಯರ್ ತೇಜಸ್ವಿನಿ ಜನವರಿ 31ರಂದು ಮನೆಯಿಂದ ಹೊರಟು ನಿಗೂಢವಾಗಿ ಕಾಣೆಯಾಗಿದ್ದರು. ಕಳೆದ ಎಂಟು ತಿಂಗಳುಗಳಿಂದ ಇಬ್ಬರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್‌ಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಿರುವುದು ತಿಳಿದುಬಂದಿದ್ದು, ಆದರೆ ಮೊಬೈಲ್ ಫೋನ್ ಅಥವಾ ಎಟಿಎಂ ಕಾರ್ಡ್ ಬಳಸಿಲ್ಲ ಎಂಬುದು ದೃಢಪಟ್ಟಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರೊಂದಿಗೆ ಸಹ ಯಾವುದೇ ಸಂಪರ್ಕ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭಿಕ ಹಂತದಲ್ಲಿ ಅವರು ಮಲೆ ಮಹದೇಶ್ವರ ಬೆಟ್ಟ ಕಡೆಗೆ ಹೋಗಿರುವ ಸುಳಿವು ಸಿಕ್ಕಿದ್ದರೂ, ನಂತರದ ತನಿಖೆಯಲ್ಲಿ ಮುಂಬೈ, ಚೆನ್ನೈ, ಕೊಯಮತ್ತೂರು, ದೆಹಲಿ, ಕಾಶಿ, ಕೇರಳ, ಚಾಮರಾಜನಗರ ಮತ್ತು ಮೈಸೂರು ಸೇರಿದಂತೆ ನೂರಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಪತ್ತೆಯಾಗಿಲ್ಲ.

ಪೋಷಕರು ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರೂ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದರು. ಆದರೆ ಇದೀಗ ಸರ್ಕಾರ ಸಿಐಡಿಗೆ ತನಿಖೆ ಹಸ್ತಾಂತರಿಸಿದೆ.

ವಿದ್ಯಾರಣ್ಯಪುರ ಪೊಲೀಸರು ಸಂಗ್ರಹಿಸಿದ ಎಲ್ಲಾ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಈಗ ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ವಿಶೇಷ ತಂಡವು ಪ್ರಕರಣದ ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 116