ಅಪರಾಧ

ಇಂಜಿನಿಯರಿಂಗ್ ವಿದ್ಯಾರ್ಥಿಗಳ ರಂಪಾಟ ವೀಡಿಯೋ ವೈರಲ್: ಪೊಲೀಸ್ ಸ್ಪಷ್ಟನೆ | ಮಂಗಳೂರಿನ ಪುತ್ತೂರಿನದ್ದಲ್ಲ, ಆಂಧ್ರದ ಚಿತ್ತೂರಿನ ಪುತ್ತೂರಿನದ್ದು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿಕೊಂಡು ಓರ್ವ ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ವೀಡಿಯೋ ವೈರಲ್ ಆಗಿದ್ದು, ಇದು ಪುತ್ತೂರಿನದ್ದು ಎಂದು ಬರೆಯಲಾಗಿತ್ತು. ಇದರ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಮಂಗಳೂರಿನ ಪುತ್ತೂರಿಗೆ ಸಂಬಂಧಪಟ್ಟ ವೀಡಿಯೋ ಇದಲ್ಲ ಎಂದು ಪ್ರಕಟಣೆ ತಿಳಿಸಿದೆ.

maithri

ಪುತ್ತೂರು ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ವೀಡಿಯೋ ಇದಾಗಿತ್ತು. ಪುತ್ತೂರು ಕಾಲೇಜು ವಿದ್ಯಾರ್ಥಿಗಳು ಇದಾಗಿರಬೇಕು ಎಂಬ ನೆಲೆಯಲ್ಲಿ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುತ್ತೂರಿನ ವೀಡಿಯೋ ಇದು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 110