tamanvi
ಅಪರಾಧ

ಗುರುವಾಯನಕೆರೆ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಗುರುವಾಯನಕೆರೆಯ ಕಟ್ಟಡವೊಂದರ ಆವರಣದಲ್ಲಿ ಯುವಕನೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಕಾಂಪ್ಲೆಕ್ಸ್ ಆವರಣದಲ್ಲಿ ಜೂ‌ನ್ 1ರಂದು ಬೆಳಗ್ಗೆ 7 ಗಂಟೆಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್ ಗೌಡ (32) ಎಂಬವರ ಮೃತದೇಹ ಪತ್ತೆಯಾಗಿದೆ.

ಈ ಸಾವಿನ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿದ್ದು, ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಷ್ಠಧಿಕಾರಿ ಡಾ.ಅರುಣ್ ಕುಮಾರ್, ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮ ರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ‌ ಸಿ.ಕೆ, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಮತ್ತು ತಂಡ ತನಿಖೆ ನಡೆಸುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 118