tamanvi
ಅಪರಾಧ

ಗುರುವಾಯನಕೆರೆಯಲ್ಲಿ ಪೆರ್ನೆಯ ಯುವಕನ ಮೃತದೇಹ ಪತ್ತೆ ಪ್ರಕರಣ: ಮೂವರು ಪೊಲೀಸ್ ವಶ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಗುರುವಾಯನಕೆರೆಯಲ್ಲಿ ಪತ್ತೆಯಾದ ಯತೀಶ್ (33 ವ) ಅವರ ಮೃತದೇಹಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

maithri

ಬಂಧಿತರನ್ನು ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿ ನಿವಾಸಿ ಇಬ್ರಾಹಿಂ (54) ಎಂದು ಗುರುತಿಸಲಾಗಿದೆ.

ಮೃತದೇಹ ಪತ್ತೆಯಾದ ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಮೂವರು ಆರೋಪಿಗಳು ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಆರೋಪಿಗಳ ಹಲ್ಲೆಯಿಂದಾಗಿ ಯತೀಶ್ ಮೃತಪಟ್ಟಿರುವುದಾಗಿ ಸಹೋದರ ಪೆರ್ನೆ ನಿವಾಸಿ ನಿತಿನ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117