ಅಪರಾಧ

ಪಾಪನಾಶಿನಿ ಹೊಳೆಗೆ ಜಾನುವಾರು ಅವಶೇಷ ಎಸೆದ ಪ್ರಕರಣ – ಆರೋಪಿ ಅಶೋಕ ಬಂಧನ!

Avg

ಈ ಸುದ್ದಿಯನ್ನು ಶೇರ್ ಮಾಡಿ

ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಭಾಗದ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

maithri

ಶಿರ್ವ ಪದವು ನಿವಾಸಿ ಅಶೋಕ (52) ಬಂಧಿತ ಆರೋಪಿ.

ಜೂನ್ 1ರಂದು ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಕಂಡುಬಂದಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯ ಪಿಎಸ್ಐ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಜಾನುವಾರಿನ ಮೇಲ್ದವಡೆಯ ಭಾಗ, ಎರಡು ಗೆರಸುಗಳು, ಮಾಂಸ ಹಾಗೂ ಹೊಟ್ಟೆಯ ಒಳಭಾಗಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ಆರಂಭಿಸಲಾಗಿತ್ತು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಜಾನುವಾರನ್ನು ಕಡಿದು ಮಾಂಸ ಮಾಡಿ ಅದರ ಅವಶೇಷಗಳನ್ನು ಹೊಳೆಗೆ ಎಸೆದ ಆರೋಪದಡಿ ಅಶೋಕ (52) ಎಂಬಾತನನ್ನು ಶುಕ್ರವಾರ ಬಂಧಿಸಿದ್ದಾರೆ.

ಆರೋಪಿಯಿಂದ ಜಾನುವಾರಿನ ಚರ್ಮ ಹಾಗೂ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 112