tamanvi
ಅಪರಾಧ

ಪುತ್ತೂರಿನ ಲವ್ – ಸೆಕ್ಸ್ – ದೋಖಾ ಪ್ರಕರಣ: ಹಣ ಪಾವತಿಗೆ ಗಡು ನೀಡಿದ ಹೈಕೋರ್ಟ್!! ರಾಜಿ ಸಂಧಾನದ ಸಾಧ್ಯತೆಯನ್ನು ತೆರೆದಿಟ್ಟು, ಮಧ್ಯಸ್ಥಿಕೆ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗಲು ಆದೇಶ!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಪ್ರೀತಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ವಿವಾದವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸೂಚಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಅವರು ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸುವ ಕುರಿತು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರೂ ಜೂನ್ 19ರಂದು ಮಧ್ಯಸ್ಥಿಕೆ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಆದೇಶಿಸಿದೆ.

ಈ ನಡುವೆ, ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ಆರೋಪಿ ಮೊದಲ ತಿಂಗಳ ₹75 ಸಾವಿರವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟಿದ್ದು, ಆ ಮೊತ್ತವನ್ನು ತಕ್ಷಣವೇ ಸಂತ್ರಸ್ತೆಗೆ ಪಾವತಿಸುವಂತೆ ಹೈಕೋರ್ಟ್ ಸೂಚಿಸಿದೆ. ಅಲ್ಲದೆ, ಎರಡನೇ ತಿಂಗಳ ₹75 ಸಾವಿರವನ್ನು ನಾಲ್ಕು ದಿನಗಳೊಳಗೆ ಪಾವತಿಸುವಂತೆಯೂ ನಿರ್ದೇಶನ ನೀಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿರುವ ನ್ಯಾಯಾಲಯ, ಮಧ್ಯಸ್ಥಿಕೆ ಕೇಂದ್ರದಲ್ಲಿ ನಡೆಯುವ ಸಂಧಾನದ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119