tamanvi
ಅಪರಾಧ

ಆಲಂಕಾರು: ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ ಶಂಕೆ – ಅನಾಥವಾದ ಮಗು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ದಂಪತಿ ಶವ ಪತ್ತೆಯಾಗಿದ ಘಟನೆ ಆಲಂಕಾರು ಕಜೆಯಲ್ಲಿ ಬಾಡಿಗೆ ಮನೆಯಲ್ಲಿ ಜೂ.20ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

maithri

ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ದಂಪತಿ ಮೃತಪಟ್ಟವರು.

ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗು ದೃವಿಯೊಂದಿಗೆ ವಾಸವಾಗಿದ್ದರು.

ಒಂದು ತಿಂಗಳ ಹಿಂದೆ ಆಲಂಕಾರು ಪೇಟೆಯ ಹೋಟೆಲ್ ಬಿಟ್ಟು ತೆರಳಿದ್ದ ಇವರು, ಜೂ. 19ರ ಸಂಜೆ ಆಲಂಕಾರು ಕಜೆಯ ಬಾಡಿಗೆ ಮನೆಗೆ ಪುನಃ ಬಂದಿದ್ದರು. ಜೂ. 20ರಂದು ಘಟನೆ ನಡೆದಿದ್ದು, ಮನೆಯ ಒಳಗಿನ ಚಿಲಕ ಹಾಕಲಾಗಿತ್ತು. ಎರಡು ವರ್ಷದ ಹೆಣ್ಣು ಮಗು ಅತ್ತು ಮತ್ತೆ ನಿದ್ದೆಗೆ ಜಾರಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಡಬ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117