ಅಪರಾಧ

ಎಐ ಟೂಲ್ಸ್’ನಲ್ಲಿ ಗೃಹಿಣಿಯ ಫೊಟೋ ಎಡಿಟ್: ಮಹಿಳೆ ಆತ್ಮಹತ್ಯೆ ಯತ್ನ!!

ಈ ಸುದ್ದಿಯನ್ನು ಶೇರ್ ಮಾಡಿ

ಎಐ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಬರೋಬ್ಬರಿ 30 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟು ಬ್ಲ್ಯಾಕ್‌ಮೇಲ್ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

maithri

ಕಿಡಿಗೇಡಿಗಳ ಕಾಟಕ್ಕೆ ಬೇಸತ್ತ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಗೃಹಿಣಿಯೊಬ್ಬರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಕಿಡಿಗೇಡಿಗಳು ಎಐ ತಂತ್ರಜ್ಞಾನದ ಮೂಲಕ ಗೃಹಿಣಿಯ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಆಕೆಯ ಮೊಬೈಲ್ ಸಂಖ್ಯೆಗೆ ಕಳುಹಿಸಿದ್ದಾರೆ. ಬಳಿಕ 30 ಲಕ್ಷ ರೂ. ಹಣ ನೀಡಬೇಕು, ಇಲ್ಲದಿದ್ದರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.

ಮಹಿಳೆ ಹಣ ನೀಡಲು ನಿರಾಕರಿಸಿದಾಗ, ಕಿರಾತಕರು ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆ ತೆರೆದು, ಅದರಲ್ಲಿ ಗೃಹಿಣಿಯ ಎಡಿಟ್ ಮಾಡಿದ ಫೋಟೋಗಳನ್ನು ಅಪ್‌ಲೋಡ್ ಮಾಡಿ, ‘300 ರೂ.ಗೆ ಲಭ್ಯವಿದ್ದಾರೆ’ ಎಂದು ಅತ್ಯಂತ ಅವಹೇಳನಕಾರಿಯಾಗಿ ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್‌ಗಳನ್ನು ನೋಡಿ ತೀವ್ರ ಮನನೊಂದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ ಕುರಿತು ಸಂತ್ರಸ್ತೆಯ ಪತಿ ಲಕ್ಕವಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗೃಹಿಣಿಯ ಮೊಬೈಲ್‌ಗೆ ಸಂದೇಶ ಕಳುಹಿಸಿ ಬೆದರಿಕೆ ಹಾಕಿದ್ದು ಅದೇ ಗ್ರಾಮದ ಅಕ್ಷಯ್ ಹಾಗೂ ಸಾಹುಲ್ ಹಮೀದ್ ಎಂಬ ಇಬ್ಬರು ಯುವಕರು ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ. ಈ ಇಬ್ಬರು ಯುವಕರು ಈ ಹಿಂದೆ ಕೂಡ ಇದೇ ರೀತಿ ಬೇರೆ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿ ಹಣ ಪೀಕಲು ಯತ್ನಿಸಿದ್ದರು ಎನ್ನಲಾಗಿದೆ.

ಪ್ರಸ್ತುತ ಆರೋಪಿಗಳ ಮೊಬೈಲ್ ಸಂಖ್ಯೆ ಸಮೇತ ಗೃಹಿಣಿಯ ಪತಿ ಪೊಲೀಸರಿಗೆ ದೂರು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಕೃತಿ ಮೆರೆದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…

1 of 115