tamanvi
ಅಪರಾಧ

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ: ಇಬ್ಬರ ಬಂಧಿಸಿದ ವಿಟ್ಲ ಪೊಲೀಸರು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಅಂಬರ್‌ಗ್ರೀಸ್‌ (ತಿಮಿಂಗಿಲ ವಾಂತಿ)ಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.

maithri

ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು ಕುಮಾರ್‌ (32) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಅಂಬರ್‌ಗ್ರೀಸ್‌ (ತಿಮಿಂಗಿಲ ವಾಂತಿ)ಯನ್ನು ಮಾರಾಟ ಮಾಡಲು ಸ್ಕೂಟರ್ ನಲ್ಲಿ ಸಾಗಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ವಿಟ್ಲ ಠಾಣೆಯ ಎಸೈ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಎಂಬಲ್ಲಿಗೆ ತೆರಳಿ, ಸ್ಕೂಟರ್‌ ತಡೆದು ನಿಲ್ಲಿಸಿ ವಿಚಾರಿಸಿದ್ದು, ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5.73 ಗ್ರಾಂ ತೂಕದ ವಸ್ತುವನ್ನು ಹಾಜರುಪಡಿಸಿ, ಇದು ಅಂಬರ್‌ಗ್ರೀಸ್‌ (ತಿಮಿಂಗಿಲ ವಾಂತಿ) ಎಂಬುದಾಗಿ ತಿಳಿಸಿದ್ದಾರೆ.

ಆರೋಪಿಗಳ ಬಳಿಯಿದ್ದ 2 ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 140/2026, ಕಲಂ: 51 THE WILD LIFE (PROTECTION) ACT, 1972, ಕಲಂ: 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117