ಪುತ್ತೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಘಟನೆ ಆರ್ಯಾಪು ಗ್ರಾಮದ ಮರಕ್ಕ ಎಂಬಲ್ಲಿ ನಡೆದಿದೆ.
ಆರೋಪಿಗಳಾದ ವಾಹನ ಚಾಲಕ ನಾರಾಯಣ ಹಾಗೂ ಸಹಪ್ರಯಾಣಿಕ ಮೊಯ್ದುಕುಂಞಿ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 95-20262, ಕಲಂ: 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ; 11(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 19603 ರಂತೆ ಪ್ರಕರಣ ದಾಖಲಿಸಲಾಗಿದೆ. ಜಾನುವಾರು ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಜೂನ್ 25ರಂದು ಸಂಜೆ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ವಾಹನವನ್ನು ತಡೆದು ವಿಚಾರಿಸಿದಾಗ ಪೂರ್ವಾನುಮತಿ ಹಾಗೂ ಅಗತ್ಯ ದಾಖಲೆಗಳು ಇಲ್ಲದೇ ಇರುವುದು ಕಂಡುಬಂದಿದೆ.




















