ಅಪರಾಧ

ಉಪ್ಪಿನಂಗಡಿ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಪೌವತ್ತಿಲ್ ಪದಂಬಳ ನಿವಾಸಿ ಪಿ.ವಿ.ಜೋಸ್ (64) ಅವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

gl

ಸುಮಾರು ಎರಡು ತಿಂಗಳ ಹಿಂದೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಜೋಸ್ ಅವರಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಉಂಟಾಗಿತ್ತು. ಇದೇ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು, ಗುರುವಾರ ರಬ್ಬರ್ ತೋಟಕ್ಕೆ ಬಳಸಲು ತಂದಿದ್ದ ಆ್ಯಸಿಡ್ ಸೇವಿಸಿ ಅಸ್ವಸ್ಥರಾಗಿದ್ದರು ಎನ್ನಲಾಗಿದೆ.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 120