tamanvi
ಅಪರಾಧ

ದ.ಕ. ಜಿಲ್ಲಾ ಕಾರಾಗೃಹದ ಕೈದಿಗಳ ಬಳಿ ಮೊಬೈಲ್ ಪತ್ತೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ವರದಿಯಾಗಿದೆ.

ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಮೊಬೈಲ್ ಹೊಂದಿದ್ದ ಕೈದಿಗಳು. ಜು.7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್ ವಿಭಾಗದ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದ್ದಾರೆ. ಆಗ ಅಜ್ಮಲ್ ಬಳಿ ಮೊಬೈಲ್ ಪತ್ತೆಯಾಗಿದೆ. ಅದೇ ಕೊಠಡಿಯಲ್ಲಿದ್ದ ಇನ್ನೊಬ್ಬ ಇಕ್ಬಾಲ್ ಬಳಿಯಲ್ಲೂ ಮೊಬೈಲ್ ಪತ್ತೆಯಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 118