tamanvi
ಅಪರಾಧ

ಉಪ್ಪಿನಂಗಡಿ: ಬಸ್ ನಿರ್ವಾಹಕರ ನಡುವೆ ಜಗಳ, ಹಲ್ಲೆ – ಪ್ರಕರಣ ದಾಖಲು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಾಡಹಗಲೇ ಕಬ್ಬಿಣದ ರಾಡ್‍ನೊಂದಿಗೆ ಬಸ್ಸಿನೊಳಗೆ ನುಗ್ಗಿ ಮಹಿಳೆಯರು ಮಕ್ಕಳಾದಿಯಾಗಿ ಪ್ರಯಾಣಿಕರ ಸಮ್ಮುಖದಲ್ಲೇ ಮಾರಾಮಾರಿಗೆ ತೊಡಗಿದ್ದ ಇಬ್ಬರು ಖಾಸಗಿ ಬಸ್ ನಿರ್ವಾಹಕರ ಮೇಲೆ ಉಪ್ಪಿನಂಗಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.

maithri

ಉಪ್ಪಿನಂಗಡಿಯಿಂದ ಮಂಗಳೂರಿಗೆ ಪ್ರಯಾಣಿಕ ಸೌಲಭ್ಯವನ್ನು ಒದಗಿಸುವ ಅರಫಾ ಮತ್ತು ಲಕ್ಷ್ಮೀ ಬಸ್ಸುಗಳ ನಿರ್ವಾಹಕರ ನಡುವೆ ಜು.14ರಂದು ಸಂಜೆ ಸಮಯದ ವಿಚಾರದಲ್ಲಿ ಜಗಳ ನಡೆದು , ಅರಫಾ ಬಸ್ಸಿನ ನಿರ್ವಾಹಕ ನೌಶಾದ್ ಎಂಬಾತ ಕಬ್ಬಿಣದ ರಾಡ್ ನೊಂದಿಗೆ ಲಕ್ಷ್ಮೀ ಬಸ್ಸಿನೊಳಗೆ ಪ್ರಯಾಣಿಕರು ಕುಳಿತಿದ್ದಂತೆಯೇ ನುಗ್ಗಿ ಅದರ ನಿರ್ವಾಹಕ ಖಲಂದರ್ ಯಾನೆ ಶಾಹೀದ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಶಾಹೀದ್ ಕೂಡಾ ನೌಶಾದ್ ಮೇಲೆ ಕೈಯಿಂದ ಹಲ್ಲೆ ಮಾಡಿದ ಪರಿಣಾಮ ಇಬ್ಬರಿಗೂ ಗಾಯಗಳಾಗಿವೆ. ಇಬ್ಬರೂ ಕೂಡಾ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡರೂ ಪೊಲೀಸರಿಗೆ ದೂರು ನೀಡಿರಲಿಲ್ಲ.

ಹಾಡ ಹಗಲೇ ಸಾರ್ವಜನಿಕರ ಸಮ್ಮುಖದಲ್ಲಿ , ಪ್ರಯಾಣಿಕರು ಬಸ್ಸಿನೊಳಗೆ ಕುಳಿತ್ತಿದ್ದ ವೇಳೆ ಬಸ್ಸಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆಸಿ ಸಾರ್ವಜನಿಕ ಶಾಂತಿ ಭಂಗವನ್ನುಂಟು ಮಾಡಿದ ಕಾರಣಕ್ಕೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117