tamanvi
ಅಪರಾಧ

ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ!! ಖೋಟಾ ನೋಟು, ಯಂತ್ರ ಸೇರಿದಂತೆ 7 ಆರೋಪಿಗಳ ಬಂಧನ!

ಈ ಸುದ್ದಿಯನ್ನು ಶೇರ್ ಮಾಡಿ

ಎಲೆಕ್ಟ್ರಾನಿಕ್ ಉಪಕರಣಗಳ ಸಹಾಯದಿಂದ ಭಾರತೀಯ ಕರೆನ್ಸಿ ನೋಟುಗಳನ್ನು (ಖೋಟಾ ನೋಟು) ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಇಬ್ರಾಹಿಂ, ಶರೀಪ, ಸಂದೀಪ ಪುಂಡಲಿಕ ಶೋಳಂಬಿ, ಮಹಮ್ಮದ್ ನಬಾಸ್,  ಸಲ್ಮಾನ್ ಫಾರೀಸ್, ಸಿರಾಜುದ್ದೀನ್. ಇರ್ಷಾದ್ ಬಂಧಿತರು.

ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಕಟ್ಟಡ ಜಾಲ ಸಕ್ರೀಯವಾಗಿತ್ತು ಎನ್ನಲಾಗಿದೆ. ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿಕೊಂಡು, ಅದರಲ್ಲಿ ಖೋಟಾ ನೋಟುಗಳನ್ನು ತಯಾರು ಮಾಡಲಾಗುತ್ತಿತ್ತು. ಸ್ಥಳದಲ್ಲಿ 500 ರೂ. ಮುಖಬೆಲೆಯ ನೋಟು 1 ಹಾಗೂ 500 ರೂ ಮುಖ ಬೆಲೆಯ ನೋಟುಗಳಂತೆ ಕಾಣುವ A-4 ಸೈಜ್ ಹಾಳೆಗಳು 21, ಗಣಕಯಂತ್ರ, ಝರಾಕ್ಸ್ ಮೆಷಿನ್, ಸೀಲ್ ಗಳು ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿವೆ

ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರಿಗೆ ಬಂದ ಮಾಹಿತಿ ಮೇರೆಗೆ ಗುರುವಾರ ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2026 ಕಲಂ: 178 BNS-2023ರಂತೆ ಪ್ರಕರಣ ದಾಖಲಿಸಲಾಗಿದೆ.

ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿಂದು ಮಣಿ ಆರ್.ಎನ್, ಕೊಡಗು ಜಿಲ್ಲಾ ಸಿಬ್ಬಂದಿಗಳಾದ ಯೊಗೀಶ್ ಬಿ, ನಿರಂಜನ್  ಎಂ ಎನ್ ಹಾಗೂ ದ.ಕ ಜಿಲ್ಲಾ ವಿಶೇ಼ಷ ಘಟಕದ ಪೊಲೀಸ್ ನಿರೀಕ್ಷಕ ನಂದಕುಮಾರ್, ಸಿಬ್ಬಂದಿಗಳಾದ ಎ.ಎಸ್.ಐ ದೀಪಕ್, ಹೆಚ್.ಸಿ ಸತೀಶ್, ಹೆಚ್.ಸಿ ರೌಫ್ ಕಾರ್ಯಾಚರಣೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 118