tamanvi
ಅಪರಾಧ

ಬಿ.ಸಿ.ರೋಡ್ ಇರಿತ ಪ್ರಕರಣ: ಏಕಮುಖ ಪ್ರೀತಿಯೇ ಕೊಲೆಗೆ ಕಾರಣ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸಮೀಪ ಯುವತಿಗೆ ಇರಿದು ಹತ್ಯೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

maithri

ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ಹೇಳಲಾಗಿದೆ. ಇನ್ನೊಂದೆಡೆ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಚೇತನ್ ಯುವತಿಯ ದೂರದ ಸಂಬಂಧಿ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಲಾಗಿದೆ. ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ಎಂಬ ಯುವತಿ ಹತ್ಯೆಗೊಳಗಾಗಿದ್ದು, ಕಕ್ಯಪದವು ಕಡೆಗೆ ತೆರಳಲು ಕೆಎಸ್ಆರ್ಟಿಸಿ ಬಸ್ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.

ಬಸ್ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117