ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಎಡಿಟ್ ಮಾಡಿ, ಭಜರಂಗದಳ ಕಾರ್ಯಕರ್ತ ಎಂದು ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹ ಪ್ರಸಾರ ಮಾಡಿರುವ ಇನ್’ಸ್ಟಾ ಗ್ರಾಂ ಪೇಜ್ ಹಾಗೂ ವಾಟ್ಸ್ ಆ್ಯಪ್ ಗ್ರೂಪ್, ಫೇಸ್ ಬುಕ್ ಪೇಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
1) troll_master.__Instagram Account 2) Yuva Belthangady Whatsappgroup 3) PPadmaraj Padmarajpari Whatsapp group 4) Padmaraj Padmaraj pariWhatsapp group 5)Yuva CongressBelthangady Whatsappgroup 6) Facts and Justice Whatsappgroupಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Shailaja Amarnath ಎಂಬವರ ಫೇಸ್ ಬುಕ್ ಖಾತೆಯಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಪೋಸ್ಟ್, Chethan Belchada ಎಂಬ ಪೇಸ್ ಬುಕ್ ಖಾತೆಯಲ್ಲಿ ಪ್ರಕರಣದ ಆರೋಪಿಯ ಪೋಟೋವನ್ನು ಕಾಂಗ್ರೆಸ್ ಪಾರ್ಟಿಯ ಕಾರ್ಯಕರ್ತೆನೆಂದು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿದ್ದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.





















