tamanvi
ಅಪರಾಧ

82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ನಾಶ: ಮಹತ್ವದ ಕಾರ್ಯಾಚರಣೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಾದಕ ವಸ್ತು ಜಾಲದ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಮಂಗಳೂರು ನಗರ ಪೊಲೀಸರು, ನ್ಯಾಯಾಲಯದ ಅನುಮತಿಯೊಂದಿಗೆ ಸುಮಾರು ₹82 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಿದ್ದಾರೆ.

maithri

ಜುಲೈ 29ರಂದು ಬೆಳಿಗ್ಗೆ 11 ಗಂಟೆಗೆ ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ Ramky Energy and Environment Ltd. ಸಂಸ್ಥೆಯಲ್ಲಿ ನ್ಯಾಯಾಲಯದ ಅನುಮತಿ ಹಾಗೂ ಡ್ರಗ್ ಡಿಸ್ಪೋಸಲ್ ಕಮಿಟಿ ಸಮ್ಮುಖದಲ್ಲಿ ಮಾದಕ ವಸ್ತುಗಳ ನಾಶ ಕಾರ್ಯ ನಡೆಸಲಾಯಿತು.

ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 59 ಎನ್‌ಡಿಪಿಎಸ್ (NDPS) ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ 450 ಕೆ.ಜಿ. ಗಾಂಜಾ, 43 ಕೆ.ಜಿ. 260 ಗ್ರಾಂ ಎಂ.ಡಿ.ಎಂ.ಎ., 880 ಗ್ರಾಂ ಹೈಡೋ ವೀಡ್ ಗಾಂಜಾ, 80 ಗ್ರಾಂ ಚರಸ್ ಹಾಗೂ 1 ಕೆ.ಜಿ. 200 ಗ್ರಾಂ ಭಾಂಗ್ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ಸುಟ್ಟು ನಾಶಪಡಿಸಲಾಯಿತು.

ನಾಶಪಡಿಸಿದ ಮಾದಕ ವಸ್ತುಗಳಲ್ಲಿ 2024ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡಿದ್ದ ₹75 ಕೋಟಿ ಮೌಲ್ಯದ 37 ಕೆ.ಜಿ. ಎಂ.ಡಿ.ಎಂ.ಎ., 2025ರಲ್ಲಿ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾದ ₹4.47 ಕೋಟಿ ಮೌಲ್ಯದ 4 ಕೆ.ಜಿ. ಎಂ.ಡಿ.ಎಂ.ಎ., ಕೊಣಾಜೆ ಠಾಣೆಯ ₹20 ಲಕ್ಷ ಮೌಲ್ಯದ 106 ಕೆ.ಜಿ. ಗಾಂಜಾ ಹಾಗೂ ಮೂಡಬಿದ್ರೆ ಠಾಣೆಯ ₹36 ಲಕ್ಷ ಮೌಲ್ಯದ 111 ಕೆ.ಜಿ. ಗಾಂಜಾ ಪ್ರಮುಖವಾಗಿವೆ.

2026ರಲ್ಲಿ ಇದುವರೆಗೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 87 ಎನ್‌ಡಿಪಿಎಸ್ ಪ್ರಕರಣಗಳು ದಾಖಲಾಗಿದ್ದು, 157 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ ₹8,18,30,130 ಮೌಲ್ಯದ 148 ಕೆ.ಜಿ. 615 ಗ್ರಾಂ ಗಾಂಜಾ, 7 ಕೆ.ಜಿ. 165 ಗ್ರಾಂ ಎಂ.ಡಿ.ಎಂ.ಎ. ಹಾಗೂ 1 ಕೆ.ಜಿ. 705 ಗ್ರಾಂ ಹೈಡೋ ವೀಡ್ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 356 ಪ್ರಕರಣಗಳಲ್ಲಿ 463 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮಾದಕ ವಸ್ತುಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆಯ QR ಕೋಡ್, ತುರ್ತು ಸಹಾಯವಾಣಿ 112 ಅಥವಾ 9480802321 ಸಂಖ್ಯೆಗೆ ತಕ್ಷಣ ಮಾಹಿತಿ ನೀಡುವಂತೆ ಮಂಗಳೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 116