tamanvi
ಅಪರಾಧ

ಬಸ್’ನಲ್ಲಿ ಖಾಸಗಿ ಅಂಗ ಪ್ರದರ್ಶಿಸಿದ ವೃದ್ಧ: ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಖಾಸಗಿ ಅಂಗವನ್ನು ಇತರ ಪ್ರಯಾಣಿಕರಿಗೆ ಕಾಣುವಂತೆ ಪ್ರದರ್ಶಿಸಿದ ಆರೋಪದ ಮೇಲೆ ಅಪರಿಚಿತ ವೃದ್ಧನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

maithri

ಪೊಲೀಸರ ಮಾಹಿತಿ ಪ್ರಕಾರ, ಜು. 30ರಂದು ಖಾಸಗಿ ಬಸ್ ಚಾಲಕ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಪ್ರಯಾಣಿಕರೊಂದಿಗೆ ತೆರಳಿದ್ದರು. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಸುಮಾರು 60–70 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಬಸ್ ಹತ್ತಿ ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಬಳಿಕ ಮೆಲ್ಕಾರ್ ಜಂಕ್ಷನ್‌ನಲ್ಲಿ ಇಳಿದು ಹೋಗಿದ್ದಾನೆ. ಪ್ರಯಾಣದ ವೇಳೆ ಸದರಿ ವ್ಯಕ್ತಿ ತನ್ನ ಖಾಸಗಿ ಅಂಗವನ್ನು ಇತರ ಪ್ರಯಾಣಿಕರಿಗೆ ಕಾಣುವಂತೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ದೃಶ್ಯವನ್ನು ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಬಳಿಕ ಈ ವಿಚಾರ ಚಾಲಕರ ಗಮನಕ್ಕೆ ಬಂದಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 107/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117