tamanvi
ಅಪರಾಧ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ: ಮೂರು ಜಾನುವಾರುಗಳ ರಕ್ಷಣೆ, ಓರ್ವ ವಶಕ್ಕೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ತಡೆದು, ಮೂರು ಜಾನುವಾರುಗಳನ್ನು ರಕ್ಷಿಸಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮುನ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ನಡೆದಿದೆ.

ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಜಿಡೆಕಲ್ಲು ಬಳಿ KA 19 D 0948 ನೋಂದಣಿಯ ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲಿಸಿದರು.

ಈ ವೇಳೆ ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆಯಾಗಿದೆ. ವಾಹನ ಚಾಲಕ ಮಹಮ್ಮದ್ ಜಬ್ಬಾರ್‌ನನ್ನು ವಿಚಾರಿಸಿದಾಗ, ಶಾಂತಿಗೋಡು ಗ್ರಾಮದ ನಿವಾಸಿ ಅಶೋಕ್ ಎಂಬವರಿಂದ ಜಾನುವಾರುಗಳನ್ನು ಖರೀದಿಸಿ, ಯಾವುದೇ ಪರವಾನಗಿ ಇಲ್ಲದೆ ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮೂರು ಜಾನುವಾರುಗಳ ಸಹಿತ ಪಿಕ್‌ಅಪ್ ವಾಹನ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 101/2026ರಂತೆ ಪ್ರಕರಣ ದಾಖಲಾಗಿದ್ದು, ಪ್ರಾಣಿ ಹಿಂಸಾ ಕಾಯ್ದೆಯ ಕಲಂ 11(D), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಹಾಗೂ IMV Act ಕಲಂ 66 R/w 192(A) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 118