ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರು ಬಜಾಲ್-ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಎಂದು ಗುರುತಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ವಿವಿಧ ಐಪಿಸಿ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ವಿದೇಶದಲ್ಲಿ ನೆಲೆಸಿದ್ದನು.
ಸೆಪ್ಟೆಂಬರ್ 15ರಂದು ವಿದೇಶದಿಂದ ಮಂಗಳೂರಿಗೆ ಮರಳುತ್ತಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.























