tamanvi
ಅಪರಾಧ

ದರ್ಬೆ ಗಲಾಟೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಲ್ಯಾಮಿನೇಶನ್‌ಗೆ ನೀಡಲಾಗಿದ್ದ ಜನನ ಪ್ರಮಾಣಪತ್ರಕ್ಕೆ ಹಾನಿಯಾಗಿರುವ ವಿಚಾರಕ್ಕೆ ಸಂಬಂಧಿಸಿ ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಅಂಗಡಿ ಮಾಲಕಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಇಬ್ಬರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಆರೋಪಿಗಳಾದ ಚಿಕ್ಕಮುಳ್ಳೂರು ತಾರಿಗುಡ್ಡೆ ನಿವಾಸಿ ಮಹಮ್ಮದ್ ನೌಷಾದ್ (32) ಹಾಗೂ ಪೆರ್ನೆ ನಿವಾಸಿ ಅಬ್ದುಲ್ ನಿಯಾಝ್ (26) ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕೆಲ ದಿನಗಳ ಹಿಂದೆ ಲ್ಯಾಮಿನೇಶನ್‌ಗಾಗಿ ನೀಡಲಾಗಿದ್ದ ಜನನ ಪ್ರಮಾಣಪತ್ರಕ್ಕೆ ಹಾನಿಯಾಗಿರುವ ವಿಚಾರಕ್ಕೆ ಸಂಬಂಧಿಸಿ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರೊಂದಿಗೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಹಲ್ಲೆ ನಡೆಸಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ನ್ಯಾಯಾಲಯದ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119