2012ರಲ್ಲಿ ಧರ್ಮಸ್ಥಳ ಸಮೀಪ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದ್ದು, 3 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಸೌಜನ್ಯ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ನಿರ್ದೇಶನ ನೀಡಿದ್ದು, ಹೊಸ ತಂಡದಿಂದ ಸ್ವತಂತ್ರವಾಗಿ ಮರು ತನಿಖೆ ನಡೆಸುವಂತೆ ಸೂಚಿಸಿದೆ. ಪ್ರಕರಣದ ತನಿಖೆ ಮತ್ತು ಸಾಕ್ಷ್ಯಗಳ ಕುರಿತು ಈ ಹಿಂದೆ ಸುಪ್ರೀಂ ಕೋರ್ಟ್ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸೌಜನ್ಯ ತಾಯಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ತನಿಖಾ ಸಂಸ್ಥೆಯ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮರುತನಿಖೆ ನಡೆಸುವಂತೆ ಈಗ ಆದೇಶ ಹೊರಡಿಸಿದೆ.























