ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮನೆ ಹಾಗೂ ಕೊಟ್ಟಿಗೆಯ ಪರಿಸರವನ್ನು ಪೊಲೀಸರು ನಿಯಮಾನುಸಾರ ಜಪ್ತಿ ಮಾಡಿದ್ದಾರೆ.
2026ರ ಅಕ್ಟೋಬರ್ 5ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಅ.ಕ್ರ. 125/2026ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿ ಶಿವಪ್ರಸಾದ್ ಅವರು ತಮ್ಮ ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆಪತ್ರಗಳಿಲ್ಲದೆ ಅಕ್ರಮವಾಗಿ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಅಕ್ಟೋಬರ್ 8ರಂದು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿಯಮಾನುಸಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.






















