ಅಪರಾಧ

ಇನ್ಸ್’ಪೆಕ್ಟರ್ ಕಪಾಳಕ್ಕೆ ಬಾರಿಸಿದ ಐಎಎಸ್ ಅಧಿಕಾರಿ: ಎಫ್ಐಆರ್!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಪಬ್ ನಲ್ಲಿ ಐಡಿ ಕೇಳಿದ ಕಾರಣಕ್ಕೆ ಪೊಲೀಸ್ ಇನ್ಸ್’ಪೆಕ್ಟರ್ ಕಪಾಳಕ್ಕೆ ಬಾರಿಸಿದ ಆಂಧ್ರಪ್ರದೇಶ ಕೇಡರಿನ ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್ ಹಾಗೂ ಅವರ ಸ್ನೇಹಿತರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

gl

ಆಂಧ್ರಪ್ರದೇಶದ ಕುಪ್ಪಂನಲ್ಲಿ ವಿಶೇಷ ಅಧಿಕಾರಿಯಾಗಿ (ಕಡ ಪ್ರಾಜೆಕ್ಟ್ ಡೈರೆಕ್ಟರ್) ಸೇವೆಯಲ್ಲಿರುವ ವಿಕಾಸ್ ಮರ್ಮಠ್, ತಮ್ಮ ಗೆಳೆಯರಾದ ನಿತೇಶ್, ಅಭಯ್ ಉದಯ್ ಸಿಂಗ್ ಮತ್ತು ರೋಷನ್ ಅವರೊಂದಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿರುವ ‘ಕಾವೂರ್’ ಪಬ್‌ಗೆ ಬಂದಿದ್ದರು. ರಾತ್ರಿ ಸುಮಾರು 1:30ರ ವೇಳೆಯಲ್ಲಿ ಸಿಸಿಬಿ (ಸಿಟಿ ಕ್ರೈಮ್ ಬ್ರಾಂಚ್) ಅಧಿಕಾರಿಗಳು ಸಮವಸ್ತ್ರದಲ್ಲೇ ಪಬ್ ಪರಿಶೀಲನೆಗಾಗಿ ತೆರಳಿದ್ದರು.

ಈ ವೇಳೆ ಸಿಸಿಬಿ ಅಧಿಕಾರಿಗಳು ನಿಯಮಿತ ಪರಿಶೀಲನೆಯ ಭಾಗವಾಗಿ ಐಡಿ ಕಾರ್ಡ್ ಕೇಳಿದ್ದಾರೆ. ಇದರಿಂದ ತೀವ್ರ ಕೋಪಗೊಂಡ ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್, ಅಧಿಕಾರಿಗಳ ವಿರುದ್ಧ ಅಸಭ್ಯ ಪದ ಬಳಸಿ ಬೈಯಲು ಪ್ರಾರಂಭಿಸಿದ್ದಾರೆ. ಇದನ್ನು ಪ್ರಶ್ನಿಸಲು ಹೋದ ಪೊಲೀಸ್ ಇನ್‌ಸ್ಪೆಕ್ಟರ್ ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, “ನಾನು ಐಎಎಸ್ ಅಧಿಕಾರಿ, ನಿಮ್ಮಿಂದ ಏನು ಮಾಡಲು ಸಾಧ್ಯವೋ ನೋಡಿಕೊಳ್ಳಿ” ಎಂದು ಬೆದರಿಕೆ ಹಾಗೂ ಆವಾಜ್ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ನಂತರ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಭದ್ರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ದೂರಿನ ಅನ್ವಯ ಪೊಲೀಸರು ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್ ಹಾಗೂ ಅವರ ಮೂವರು ಸ್ನೇಹಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 120