ಅಪರಾಧ

ಸಿದ್ಧಕಟ್ಟೆ : ಶಾರದೋತ್ಸವದ ಮೆರವಣಿಗೆ ವೀಕ್ಷಿಸುತ್ತಿದ್ದ ವ್ಯಕ್ತಿಗೆ ಚೂರಿ ಇರಿತ!!

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಶಾರದೋತ್ಸವದ ಮೆರವಣಿಗೆ ವೀಕ್ಷಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಕಟ್ಟೆ ಎಂಬಲ್ಲಿ ರವಿವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.

ಚೂರಿ ಇರಿತಕ್ಕೊಳಗಾದವರನ್ನು ಪ್ರಕಾಶ್ (32) ಎಂದು ಗುರುತಿಸಲಾಗಿದ್ದು, ಆತನನ್ನು ಮೂಡುಬಿದಿರೆ ಆಳ್ವಾಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಗಾಯಾಳು ಪ್ರಕಾಶ್ ನೀಡಿರುವ ಮಾಹಿತಿಯಂತೆ ಸ್ಥಳೀಯರೇ ಆಗಿರುವ ಅಕ್ಷತ್ ಮತ್ತು ಧನುಷ್ ಚೂರಿ ಇರಿದು ಪರಾರಿಯಾದವರು ಎಂದು ಹೇಳಲಾಗುತ್ತಿದೆ.

ಶನಿವಾರ ಸಿದ್ಧಕಟ್ಟೆಯಲ್ಲಿ ಪ್ರಕಾಶ್ ಮತ್ತು ಅಕ್ಷತ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ‌ ನಡೆದಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿ ಅಕ್ಷತ್ ತನ್ನ ಸ್ನೇಹಿತ ಧನುಶ್ ನೊಂದಿಗೆ ಬೈಕ್ ನಲ್ಲಿ ಬಂದು ಶಾರದೋತ್ಸವದ ಮೆರವಣಿಗೆ ವೀಕ್ಷಿಸುತ್ತಿದ್ದ ಪ್ರಕಾಶ್ ಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 121