ಉಡುಪಿ: ಪ್ರದೀಪ್ ಪೂಜಾರಿ ಅವರ ಮೇಲಿನ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸದ್ಯ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಅಧಿಕೃತ ಬಂಧನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರ ಗುರುತು ಹಾಗೂ ಇತರ ವಿವರಗಳನ್ನು ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.






















