ನೆರೆಮನೆ ನಿವಾಸಿಯಿಂದ ಅತ್ಯಾಚಾರಕ್ಕೆ ಒಳಗಾಗಿ, ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಂತ್ರಸ್ತೆಯ ಮನೆ ಪಕ್ಕದ ನಿವಾಸಿ ಅನಿಲ್ ಎಂಬಾತ ಅತ್ಯಾಚಾರ ಎಸಗಿದ್ದ. ಮಾತ್ರವಲ್ಲ, ಮಹಿಳೆಗೆ ಜೀವ ಬೆದರಿಕೆ ಒಡ್ಡಿದ್ದ. ಈ ಸಂಬಂಧ ಅ.ಕ್ರ: 92/2021, ಕಲಂ:376, 448, 323. 504. 506 ಭಾ.ದಂ.ಸಂ ಪ್ರಕರಣದಲ್ಲಿ, ಬಂಟ್ವಾಳ ಗ್ರಾಮಾಂತರ ಠಾಣಾ ಆಗಿನ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಮಾಡಿ, ಪ್ರಕರಣದ ತನಿಖಾಧಿಕಾರಿಗಳು ಹಾಗೂ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ ಡಿ ನಾಗರಾಜ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಯ ವಿರುದ್ದದ ಆರೋಪವನ್ನು ಸಾಬೀತುಗೊಳಿಸಿತು. ನ್ಯಾಯಾಧೀಶ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 54,000 ರೂ ದಂಡ ವಿಧಿಸಿ ಅದೇಶಿಸಿದ್ದಾರೆ.
ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧಾರಿ ವಾದ ಮಂಡಿಸಿದ್ದರು.






















