ಅಪರಾಧ

ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಕಾರಿನ ಮೇಲೆ ಕಲ್ಲು ತೂರಾಟ; ಗಂಭೀರ ಗಾಯ

ಅಪರಿಚಿತ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಹಣೆಗೆ ಗಾಯವಾದ ಘಟನೆ ಭಾನುವಾರ(ನ.18) ರಾತ್ರಿ ನಾಗುರ ಜಿಲ್ಲೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಹಾರಾಷ್ಟ್ರ: ಅಪರಿಚಿತ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಹಣೆಗೆ ಗಾಯವಾದ ಘಟನೆ ಭಾನುವಾರ(ನ.18) ರಾತ್ರಿ ನಾಗುರ ಜಿಲ್ಲೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ನಾರ್ಖೇಡ್ ಗ್ರಾಮದಲ್ಲಿ ನಡೆದ ಎನ್‌ಸಿಪಿ ನಾಯಕ ಶರದ್‌ಚಂದ್ರ ಪವಾರ್‌ ಅವರ ಸಭೆಯಲ್ಲಿ ಭಾಗವಹಿಸಿ ಕಟೋಲ್‌ಗೆ ಹಿಂತಿರುಗುತ್ತಿದ್ದಾಗ ಅಪರಿಚಿತರ ಗುಂಪೊಂದು ಕಾರಿನ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.

ಘಟನೆಯಿಂದ ಕಾರಿನ ಗಾಜುಗಳು ಪುಡಿ ಪುಡಿಯಾಗಿದ್ದು ಗಾಜಿನ ಚೂರುಗಳು ಕಾರಿನ ಒಳಗೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 120