Gl jewellers
ಅಪರಾಧ

ಬಂಟ್ವಾಳ: ಯುವತಿ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

ಸರ್ಕಾರಿ ಶಾಲೆಯ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಸಂಬಂಧಿ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ:(Bantwal) ನಾವೂರು ಸರ್ಕಾರಿ ಶಾಲೆಯ ವಾರ್ಷಿಕೋತ್ಸವಕ್ಕೆ(school day) ಆಗಮಿಸಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಸಂಬಂಧಿ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನಾವೂರು ನಿವಾಸಿ ಜಯಂತ್ ಎಂದು ತಿಳಿದು ಬಂದಿದೆ.

Papemajalu garady
Karnapady garady

ನಾವೂರು ಶಾಲೆಯ ವಾರ್ಷಿಕೋತ್ಸವ ಡಿ. 14ರಂದು ನಡೆದಿದ್ದು, ಯುವತಿಯು ಮನೆಯವರ ಜೊತೆಗೆ ಕಾರ್ಯಕ್ರಮ ನೋಡಲು ಆಗಮಿಸಿದ್ದು, ಈ ಸಂದರ್ಭ ಆರೋಪಿ ಆಕೆಯನ್ನು ಬಲತ್ಕಾರವಾಗಿ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಲಾಗಿದೆ.

ಬಳಿಕ ಯುವತಿ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts