tamanvi
ಅಪರಾಧ

ಕಮರಿಗೆ ಉರುಳಿ ಬಿದ್ದ ಸೇನಾ ವಾಹನ: ಮೃತಪಟ್ಟ ಐವರಲ್ಲಿ ಮೂವರು ಕರ್ನಾಟಕ ಮೂಲದವರು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ ಪ್ರದೇಶದ ಬಲ್ಲೋಯಿ ಪ್ರದೇಶದಲ್ಲಿ ಸೇನಾ ವಾಹನ ಕಮರಿಗೆ ಉರುಳಿ ಬಿದ್ದಿದ್ದೆ. 

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ ಪ್ರದೇಶದ ಬಲ್ಲೋಯಿ ಪ್ರದೇಶದಲ್ಲಿ ಸೇನಾ ವಾಹನ ಕಮರಿಗೆ ಉರುಳಿ ಬಿದ್ದಿದ್ದೆ. ಪರಿಣಾಮ ಐವರು ಯೋಧರು ಮೃತಪಟ್ಟಿದ್ದು, ಇನ್ನೂ ಐವರಿಗೆ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ವಾಹನ ಕಮರಿಗೆ ಉರುಳಿಬಿದ್ದ ಪರಿಣಾಮ ಮೃತಪಟ್ಟ ಐವರಲ್ಲಿ ಮೂವರು ಕರ್ನಾಟಕ ಮೂಲದವರು ಎಂದು ತಿಳಿದುಬಂದಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇವರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ.

ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸೇನಾಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸೇನಾ ಟ್ರಕ್‌ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿದೆ. ಈ ಟ್ರಕ್ನಲ್ಲಿ ಮೂವರು ಕರ್ನಾಟಕ ಮೂಲದ ಯೋಧರು ಕೂಡ ಪ್ರಯಾಣಿಸುತ್ತಿದ್ದರು. ಈ ದುರಂತದಲ್ಲಿ ಕರ್ನಾಟಕ ಮೂಲದ. ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಹುತಾತ್ಮ ಯೋಧ. ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್‌ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಲೈಟ್ ಇನ್ನೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇನ್ನೋರ್ವ  ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ದಯಾನಂದ್‌ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119