ಮಲಯಾಳದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ.ವಾಸುದೇವನ್ ನಾಯರ್ (91) ಹೃದಯಾಘಾತದಿಂದ ನಿಧನರಾಗಿದ್ದಾರೆ
ಮಲಯಾಳಂ ಸಾಹಿತ್ಯ ಮತ್ತು ಸಿನಿಮಾ ಎರಡಕ್ಕೂ ಮಹತ್ವದ ಕೊಡುಗೆ ನೀಡಿದ ಎಂಟಿ ಅವರಿಗೆ 1995 ರಲ್ಲಿ ದೇಶದ ಅತ್ಯುನ್ನತ ಸಾಹಿತ್ಯ ಗೌರವವಾದ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಯಿತು.
2005 ರಲ್ಲಿ ದೇಶವು ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿತು.
ಅಗಲಿದ ಎಂಟಿ ವಾಸುದೇವನ್ ನಾಯರ್ ಅವರಿಗೆ ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಡಿ. 26 ಮತ್ತು 27 ರಂದು ಅಧಿಕೃತ ಶೋಕಾಚರಣೆ ಘೋಷಿಸಿದೆ.ಡಿಸೆಂಬರ್ 26ಕ್ಕೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ. ಇಂದು (ಡಿ. 26)ರಂದು ಸಂಜೆ 5 ಗಂಟೆಗೆ ಮಾವೂರು ಸಾರ್ವಜನಿಕ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ.