ಅಪರಾಧ

ನದಿಗೆ ಸ್ನಾನಕ್ಕೆ ಹೋದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರುಪಾಲು!!

GL
ಹಬ್ಬಕ್ಕೆಂದು ಬಂದಿದ್ದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆಂದು ಹೋದ ವೇಳೆ ನೀರು ಪಾಲಾದ ದುರ್ಘಟನೆ ವೇಣೂರು ಸಮೀಪದ ನಡ್ತಿಕಲ್ಲು ಎಂಬಲ್ಲಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ : ಹಬ್ಬಕ್ಕೆಂದು ಬಂದಿದ್ದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆಂದು ಹೋದ ವೇಳೆ ನೀರು ಪಾಲಾದ ದುರ್ಘಟನೆ ವೇಣೂರು ಸಮೀಪದ ನಡ್ತಿಕಲ್ಲು ಎಂಬಲ್ಲಿ ಸಂಭವಿಸಿದೆ.

chennai-shopping
maithri

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ವೇಣೂರು ಚರ್ಚ್ ನ ವಾರ್ಷಿಕ ಹಬ್ಬಕ್ಕೆಂದು ಕುಪ್ಪಪೆದವು ನಿವಾಸಿ ಲಾರೆನ್ಸ್(20), ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಸೂರಜ್ ಸಿ.ಎಸ್. (19), ಬಂಟ್ವಾಳ ಗ್ರಾಮದ ವಗ್ಗ ನಿವಾಸಿ ಜೈಸನ್(19) ಎಂಬವರು ಬಂದಿದ್ದರು.

ಬುಧವಾರ ನ.27ರಂದು ಊಟ ಮುಗಿಸಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಬರ್ಕಜೆ ಡ್ಯಾಂ ಬಳಿಯ ಎರುಗುಂಡಿ ಬಳಿ ಸ್ನಾನ ಮಾಡಲು ನದಿಗೆ ಇಳಿದಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರ ಮೃತದೇಹಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯುವಕರು ಮಂಗಳೂರಿನ  ನರ್ಸಿಂಗ್   ಕಾಲೇಜು ವಿದ್ಯಾರ್ಥಿಗಳೆಂದು ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105