ಅಪರಾಧ

ಮಾಣಿ: ರಸ್ತೆ ಅಪಘಾತ ಬಾಲಕ  ಸ್ಥಳದಲ್ಲೇ ಮೃತ್ಯು; ದಂಪತಿಗೆ ಗಂಭೀರ!!

GL
ಈಚ‌ರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕಿನಲ್ಲಿದ್ದ ದಂಪತಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಈಚ‌ರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕಿನಲ್ಲಿದ್ದ ದಂಪತಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಭವಿಸಿದೆ.

chennai-shopping
maithri

ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಎಂಬವರ ಪುತ್ರ ಶಾಝಿನ್ (6) ಎಂದು ಗುರುತಿಸಲಾಗಿದೆ. ಸಲೀಂ ಅವರು ತನ್ನ ಪತ್ನಿ-ಮಕ್ಕಳೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗಡಿಯಾರ ಎಂಬಲ್ಲಿ ಈಚರ್ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಿಂದ ಬೈಕಿನಲ್ಲಿದ್ದ ಶಾಝಿನ್ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಗಾಯಗೊಂಡ ಅಬ್ದುಲ್ ಸಲೀಂ, ಅವರ ಪತ್ನಿ ಹಾಗೂ ಇನ್ನಿಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 105