G L Acharya Jewellers
ಅಪರಾಧ

ಸಮುದ್ರ ಅಲೆಗಳಿಗೆ ಸಿಲುಕಿ  ಪುತ್ತೂರಿನ ವ್ಯಕ್ತಿ  ಮೃತ್ಯು!

Karpady sri subhramanya
ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

SRK Ladders

ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್ ಎಂಬವರ ಪುತ್ರ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್‌ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿ ಘಟನೆ ಸಂಭವಿಸಿದೆ. ನೀರಿನಲ್ಲಿ ಮುಳುಗಿ ವಾಪಸ್‌ ದಡಕ್ಕೆ ಬಂದವರನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದವರು, ಪಡೀಲ್ ನಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ 11 ಮಂದಿ ಕುಟುಂಬಿಕರು ಸೋಮೇಶ್ವರ ಸಮುದ್ರ ತೀರದಲ್ಲಿ ವಿಹಾರಕ್ಕೆಂದು ಆಗಮಿಸಿದ್ದರು. 2015ರಲ್ಲಿ ಪುತ್ತೂರು ನಿವಾಸಿ ಆಲಿಮಾ ರಶೀದಾ ಎಂಬವರನ್ನು ವಿವಾಹವಾಗಿದ್ದರು. ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರಿನ ಬನ್ನೂರು ಬಾಡಿಗೆ ಫ್ಲ್ಯಾಟ್ ನಲ್ಲಿ ನೆಲೆಸಿದ್ದರು.

ಸಜ್ಜದ್‌ ಆಲಿ ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದರು. ಡಿ.29 ರಂದು ಸಜ್ಜದ್ ಆಲಿ ಪುತ್ತೂರಿಗೆ ಸಹೋದರರು ಹಾಗೂ ಕುಟುಂಬಿಕರ ಜತೆಗೆ ಮದುವೆ ಸಮಾರಂಭಕ್ಕೆಂದು ಬಂದಿದ್ದರು. ಮೃತರು ತಾಯಿ ಸಾಜಿದಾ ಬೇಗಂ, ಪತ್ನಿ ಹಾಗೂ ಮಕ್ಕಳಾದ ಕೈರಾ ಫೈಜಾ, ಹಮ್ಹಾನ್ ಆಲಿ, ಹುಸೈನ್ ಆಲಿ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Kerala Astrologer

Related Posts

ಪುತ್ತೂರು: ಚಾಲಕ ನಿದ್ದೆ ಮಂಪರಿನಿಂದ ಕಂದಕಕ್ಕೆ ಉರುಳಿದ ಕಾರು; 10ವರ್ಷದ ಬಾಲಕನ ಸಮಯ ಪ್ರಜ್ಞೆಯಿಂದ ಐವರು ಪ್ರಾಣಾಪಾಯದಿಂದ ಪಾರು

ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಬಿಜಾಪುರ ಜಿಲ್ಲಾ ನಿರ್ದೇಶಕ ಸವಣೂರಿನ ಸಂತೋಷ್ ಕುಮಾರ್ ರೈ ನಿಧನ

ಕಡಬ ತಾಲೂಕಿನ ಸವಣೂರು ನಿವಾಸಿ, ಸುಳ್ಯದಲ್ಲಿ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಯೆಮನ್‌ನಲ್ಲಿ ಮರಣದಂಡನೆ !! ಸ್ವಂತ ಕ್ಲಿನಿಕ್ ಮಾಡಲು ಹೋಗಿ ಬೀದಿಗೆ ಬಿದ್ದ ಕುಟುಂಬ!!

ಯೆಮನ್ ಪ್ರಜೆಯೊಬ್ಬನ ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿ ಯೆಮನ್‌ನ…

1 of 5