Gl harusha
ಅಪರಾಧ

ಶಿಕ್ಷಕರ ಕಿರುಕುಳ ಆರೋಪ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ?

ಪುತ್ತೂರಿನ ಹೈಸ್ಕೂಲ್ ಒಂದರ ವಿದ್ಯಾರ್ಥಿಯೊಬ್ಬಳು ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಬೀರವಾಗಿ ಅಸ್ವಸ್ಥಗೊಂಡ ಬಗ್ಗೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ಹೈಸ್ಕೂಲ್ ಒಂದರ

srk ladders
Pashupathi
Muliya

ವಿದ್ಯಾರ್ಥಿಯೊಬ್ಬಳು ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಬೀರವಾಗಿ ಅಸ್ವಸ್ಥಗೊಂಡ ಬಗ್ಗೆ ವರದಿಯಾಗಿದೆ. ಶಾಲಾ ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಈ ದುಡುಕಿನ ನಿರ್ಧಾರ ತೆಗೆದುಕೊಂಡಿರುವುದಾಗಿ ತಂದೆ ಆರೋಪಿಸಿದ್ದು. ಮಗಳು ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಕಲ್ಲೇರಿ ಮೂಲದ ಸದ್ಯ ಪಡೀಲುನಲ್ಲಿದ್ದು ಪುತ್ತೂರು ನಗರದಲ್ಲಿರುವ ಸರಕಾರಿ ಪ್ರೌಢ ಶಾಲೆಯೊಂದರಲ್ಲಿ ಓದುತ್ತಿರುವ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದವಳು. ಕರಾಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ 10 ನೇ ತರಗತಿಯ ವ್ಯಾಸಂಗಕ್ಕಾಗಿ ಪುತ್ತೂರಿಗೆ ಆಗಮಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts