pashupathi
ಅಪರಾಧ

ರಸ್ತೆಯಲ್ಲೇ ಹೊತ್ತಿ ಉರಿದ ಸ್ಟೀಪರ್ ಕೋಚ್ ಬಸ್:  ಅಪಾಯದಿಂದ 30 ಪ್ರಯಾಣಿಕರು ಪಾರು

tv clinic
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯ ಎತ್ತಿನಹಳ್ಳ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ

akshaya college

ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯ ಎತ್ತಿನಹಳ್ಳ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ.

ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಬಸ್‌ನಲ್ಲಿದ್ದ ಎಲ್ಲ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೆ ಶ್ರೀ ಹೆಸರಿನ ಕ್ಲೀಪಿಂಗ್ ಕೋಚ್ ಎಸಿ ಬಸ್ ಸುಮಾರು ಮೂವತ್ತು ಪ್ರಯಾಣಿಕರನ್ನು ಹೊತ್ತು ಸಾಗುತ್ತಿತ್ತು. ಶಿರಾಡಿಘಾಟ್ ರಸ್ತೆಯಲ್ಲಿ ತೆರಳುವಾಗ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಸಿದ ಚಾಲಕ ಯೋಗೀಶ್ ಎಲ್ಲರ ಪ್ರಾಣ ಉಳಿಸಿದ್ದಾರೆ.

ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣ ಸುಟ್ಟು ಕರಕಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಆದರೆ ಅಷ್ಟರಲ್ಲೇ ಬಸ್ ಸಂಪೂರ್ಣ ಸುಟ್ಟು ಹೋಗಿತ್ತು. ಎಲ್ಲರನ್ನೂ ಬದಲಿ ಬಸ್‌ಗಳಲ್ಲಿ ಕಳುಹಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts