ಅಪರಾಧ

ಮೂವರು ಯುವಕರು ನೀರುಪಾಲು; ಓರ್ವನ ರಕ್ಷಣೆ

GL
ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಸುರತ್ಕಲ್: ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ.

chennai-shopping
maithri

ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಶಿವಲಿಂಗಪ್ಪ ಎಂಬವರ ಪುತ್ರ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್, ಬೆಂಗಳೂರು ಜೆ.ಪಿ. ನಗರ ನಿವಾಸಿ ಸತ್ಯವೇಲು (30) ಎಂದು ಗುರುತಿಸಲಾಗಿದೆ.ಪ್ರಾಣಾಪಾಯಾದಿಂದ ಪಾರಾದ ಯುವಕ ಬೀದ‌ರ್ ಜಿಲ್ಲೆ ಹಂಗಾರಗಾ ನಿವಾಸಿ ವಿಶ್ವಂಬರ್ ಎಂಬವರ ಮಗ ಪರಮೇಶ್ವರ್ (30) ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105