Gl harusha
ಅಪರಾಧ

ನರಿಮೊಗರು: ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ ಆತ್ಮಹತ್ಯೆ

ನರಿಮೊಗರು ಕೂಡುರಸ್ತೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದ ಬಗ್ಗೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನರಿಮೊಗರು ಕೂಡುರಸ್ತೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದ ಬಗ್ಗೆ ವರದಿಯಾಗಿದೆ.

srk ladders
Pashupathi
Muliya

ನರಿಮೊಗರು ಕೂಡುರಸ್ತೆಯ ಕೇಶವ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ದೀಕ್ಷಿತಾ ಅವರು ಕಾಲೇಜಿನಿಂದ ಮನೆಗೆ ಬಂದ ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ಕೇಶವ, ತಾಯಿ ಪುಷ್ಪಾ, ಸಹೋದರ ದೀಕ್ಷಿತ್ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts