ಅಪರಾಧ

ಮಂಗಳೂರಿನಲ್ಲಿ  ಬಾಂಗ್ಲಾದೇಶ ಪ್ರಜೆಯ ಬಂಧನ.!!

ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ.

akshaya college

ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25)ನನ್ನು ಬಂಧಿಸಲಾಗಿದೆ.

ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್‌ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್‌ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.

ಅನರುಲ್ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನೇಪಾಲ: ಜೈಲು ಸಿಬ್ಬಂದಿ – ಕೈದಿಗಳ ನಡುವೆ ಸಂಘರ್ಷ!! ಜೈಲಿನಿಂದ ಪರಾರಿಯಾದ ಕೈದಿಗಳ ಸಂಖ್ಯೆ ಎಷ್ಟು ಗೊತ್ತೇ?

ಕಾಲ್ಮಂಡು: ಗಲಭೆ ಪೀಡಿತ ನೇಪಾಲದ ಜೈಲೊಂದರಲ್ಲಿ ಭದ್ರತ ಸಿಬಂದಿ ಹಾಗೂ ಕೈದಿಗಳ ನಡುವೆ ಗುರುವಾರ…