Gl
ಅಪರಾಧ

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ ಬಂಧನ.!!

ಇತ್ತೀಚಿನ ದಿನಗಳಲ್ಲಿ ದೆಹಲಿಯ ಹಲವಾರು ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬರುತ್ತಿದ್ದು ದೆಹಲಿ ಪೋಲೀಸರ ನಿದ್ದೆಗೆಡಿಸಿದೆ ಈ ನಡುವೆ ಬಾಂಬ್ ಬೆದರಿಕೆ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಹನ್ನೆರಡನೇ ತರಗತಿಯ ವಿದ್ಯಾರ್ಥಿಯೋರ್ವನನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ:  ದೆಹಲಿಯ ಹಲವಾರು

Pashupathi

ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬರುತ್ತಿದ್ದು ದೆಹಲಿ ಪೋಲೀಸರ ನಿದ್ದೆಗೆಡಿಸಿದೆ ಈ ನಡುವೆ ಬಾಂಬ್ ಬೆದರಿಕೆ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಹನ್ನೆರಡನೇ ತರಗತಿಯ ವಿದ್ಯಾರ್ಥಿಯೋರ್ವನನ್ನು ಬಂಧಿಸಿದ್ದಾರೆ.

akshaya college

ವಿದ್ಯಾರ್ಥಿಯ ವಿಚಾರಣೆ ವೇಳೆ ಈತ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವುದಾಗಿಯೂ ಒಪ್ಪಿಕೊಂಡಿದ್ದಾನೆ, ಜೊತೆಗೆ ವಿಚಾರಣೆ ಸಂದರ್ಭ ಸ್ಪೋಟಕ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾನೆ, ಪದೇ ಪದೇ ನಡೆಯುತ್ತಿರುವ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ತಾನು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವುದಾಗಿ ಹೇಳಿಕೊಂಡಿದ್ದಾನೆ. ಈತ ಎಷ್ಟು ಚಾಲಾಕಿ ಹುಡುಗನೆಂದರೆ ಬಾಂಬ್ ಬೆದರಿಕೆ ಹಾಕುವಾಗ ತನ್ನ ಶಾಲೆಯೊಂದನ್ನು ಬಿಟ್ಟು ಉಳಿದ ಶಾಲೆಗಳಿಗೆ ಇ ಮೇಲ್ ಮೂಲಕ ಬೆದರಿಕೆ ಹಾಕುತ್ತಿದ್ದ ಎಂದು ಹೇಳಿಕೊಂಡಿದ್ದಾನೆ.

ಸದ್ಯ ದಕ್ಷಿಣ ದೆಹಲಿ ಪೊಲೀಸರ ವಶದಲ್ಲಿರುವ ವಿದ್ಯಾರ್ಥಿಯನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ಅಂಕಿತ್ ಚೌಹಾಣ್ ಕಳೆದ ಕೆಲ ತಿಂಗಳುಗಳಿಂದ ದೆಹಲಿಯ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬರುತ್ತಿದ್ದು ಈ ನಿಟ್ಟಿನಲ್ಲಿ ಕಾರ್ಯಾಚರಣೆಗೆ ಇಳಿದ ತಂಡ ನಗರದ ಶಾಲೆಯೊಂದರ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಆತನನ್ನು ವಿಚಾರಣೆ ನಡೆಸಿದ ವೇಳೆ ತಾನು ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ, ಜೊತೆಗೆ ಈ ಹಿಂದೆಯೂ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆಗಳನ್ನು ಹಾಕಿರುವುದಾಗಿ ವಿದ್ಯಾರ್ಥಿ ಒಪ್ಪಿಕೊಂಡಿದ್ದು ಇನ್ನೂ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts