tamanvi
ಅಪರಾಧ

ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಏರುಪೇರು ಮಹಿಳೆ ಸಾವು!!

D_shiva_bhat
ಸಂತಾನಹರಣ ಚಿಕಿತ್ಸೆ ಮಾಡಿಕೊಂಡ ಬಳಿಕ ಮಹಿಳೆಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೇ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಸಂತಾನಹರಣ ಚಿಕಿತ್ಸೆ ಮಾಡಿಕೊಂಡ ಬಳಿಕ ಮಹಿಳೆಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೇ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

maithri

ಮೃತಪಟ್ಟ ಮಹಿಳೆ ಕಡಬ ತಾಲೂಕು ಆಲಂಕಾರು ಗ್ರಾಮದ ದಯಾನಂದ ಗೌಡರ ಪತ್ನಿ ಪುಷ್ಪಾವತಿ (34) ಎಂದು ಗುರುತಿಸಲಾಗಿದೆ.

ಅವರು ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ತಾಯಿ ಮಗು ಆರೋಗ್ಯವಾಗಿದ್ದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಕೆಲವು ದಿನಗಳ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಮೃತರು ಪತಿ ಎರಡು ತಿಂಗಳ ಹೆಣ್ಣು ಮಗು ಸಹಿತ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117