Gl jewellers
ಅಪರಾಧ

ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಮೃತ್ಯು!!

ಗಲ್ಫ್ ನಿಂದ ಅಪ್ಪ ತಂದ ಪಿಸ್ತಾ ತಿನ್ನುವಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗ ಸಾವನ್ನಪ್ಪಿರುವ ಘಟನೆ ಕುಂಬಳೆ ಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾ  ತಿಂದಾಗ      ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕುಂಬಳೆ ಯಲ್ಲಿ ನಡೆದಿದೆ.

Pashupathi
Papemajalu garady
Karnapady garady

ಕುಂಬಳೆ ಭಾಸ್ಕರ ನಗರದ ಅನ್ವರ್ ಮಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ.

ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಪೋಷಕರು ಬಂದರು.

ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts