ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋದ ಹೈದರಾಬಾದ್ ಮೂಲದ ಐವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದಿಂದ 40ಕಿ.ಮೀ ದೂರದಲ್ಲಿರುವ ಕಾಲೇಶ್ವರಂ ಏತ ನೀರಾವರಿ ಯೋಜನೆಯ ಭಾಗವಾಗಿರುವ ಮರ್ಕುಕ್ ಬ್ಲಾಕ್ಷ ಕೊಂಡಪೋಚಮ್ಮ ಸಾಗರ್ ಜಲಾಶಯದಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಧನುಷ್ (20), ಸಾಹಿಲ್ (19), ಲೋಹಿತ್ (17), ಸಿಎಚ್ ಧನೇಶ್ವರ್ (17) ಮತ್ತು ಜತಿನ್ (17) ಎಂದು ಗುರುತಿಸಲಾಗಿದೆ. ಗುಂಪಿನ ಇತರ ಇಬ್ಬರನ್ನು ರಕ್ಷಿಸಿ ಸಿಕಂದರಾಬಾದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಸಿದ್ದಿಪೇಟೆ ಪೊಲೀಸ್ ಆಯುಕ್ತ ಬಿ.ಅನುರಾಧಾ ಸುದ್ದಿಗಾರರಿಗೆ ತಿಳಿಸಿದರು.
ವಿದ್ಯಾರ್ಥಿಗಳು ರಜಾದಿನಗಳಲ್ಲಿ ಜನಪ್ರಿಯ ಪ್ರವಾಸಿ ತಾಣವಾದ ಕೊಂಡಪೋಚಮ್ಮ ಸಾಗರ ಜಲಾಶಯಕ್ಕೆ ಬಂದಿದ್ದರು ಎಂದು ಅವರು ಹೇಳಿದರು. “ಅವರು ನೀರಿಗೆ ಇಳಿಯುವಾಗ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ನಿರ್ಲಕ್ಷಿಸಿದರು. ಪರಸ್ಪರರ ಕೈಗಳನ್ನು ಹಿಡಿದುಕೊಂಡು ಅವರು ಸೆಲ್ಪಿ ತೆಗೆದುಕೊಳ್ಳಲು ಪ್ರಯತ್ನಿಸಿದರು” ಎಂದು ಪೊಲೀಸ್ ಆಯುಕ್ತರು ಹೇಳಿದರು.
ಜಲಾಶಯದಲ್ಲಿದ್ದ ಇತರ ಪ್ರವಾಸಿಗರು ತಕ್ಷಣ ಎಚ್ಚರಿಕೆ ನೀಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ರಕ್ಷಣಾ ತಂಡಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಕೊಮರಿ ಮೃಗಂಕ್ (20) ಮಹಮ್ಮದ್ ಇಮ್ರಾಹಿಮ್ (17) ఎంబ ఇಬ್ಬರು ವಿದ್ಯಾರ್ಥಿಗಳನ್ನು ಸ್ಥಳೀಯ ಗ್ರಾಮಸ್ಥರು ರಕ್ಷಿಸುವಲ್ಲಿ ಯಶಸ್ವಿಯಾದರು ಆದರೆ ಇತರರನ್ನು ಉಳಿಸಲು ಸಾಧ್ಯವಾಗಲಿಲ್ಲ. ನಂತರ, ಉಳಿದ ಐದು ವಿದ್ಯಾರ್ಥಿಗಳ ಶವಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾವು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ ಸ್ಥಳಾಂತರಿಸಿದ್ದೇವೆ ಮತ್ತು ಅಪಘಾತದ ಪ್ರಕರಣವನ್ನು ದಾಖಲಿಸಿದೇವೆ ಮತ್ತು ತನಿಖೆಯನ್ನು ಪ್ರಾರಂಭಿಸಿದೇವೆ” ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಾವಿನ ಬಗ್ಗೆ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಮತ್ತು ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ.