ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಕಾರು ಅಪಘಾತ ಆದ ಬಳಿಕ ಕಾರು ನುಜ್ಜುಗುಜ್ಜಾಗಿರುವುದನ್ನು ನೋಡಿದರೆ ಆತಂಕ ಹೆಚ್ಚುತಿತ್ತು. ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಅವರ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗುವ ಮುನ್ನ ನಾಯಿ ಅಡ್ಡ ಬಂದಿದೆ. ಈ ವೇಳೆ ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ನಾಲ್ವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಲಾರಿಗೆ ಒಂದು ವೇಳೆ ಕಾರು ಡಿಕ್ಕಿ ಹೊಡೆದಿದ್ದರೆ ಅಪಾಯ ಆಗುತಿತ್ತು. ಕಾರು ಚಾಲಕನ ಸಮಯಪ್ರಜ್ಞೆಯಿಂದ ಲಕ್ಷ್ಮೀ ಹೆಬ್ಬಾಳ್ಳರ್ ಮತ್ತು ಅವರ ಸಹೋದರನ ಜೀವ ಉಳಿದಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಘಟನೆ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಆರೋಗ್ಯ ವಿಚಾರಿಸಿದರು. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ಎರಡು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಒಂದು ತಿಂಗಳು ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಾತನಾಡಿದ್ದು ಬೆಳಿಗ್ಗಿನ ಜಾವ ಅಪಘಾತ ಆಗಿದೆ. ಲಾರಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಲಕ್ಷ್ಮೀ ಹೆಬ್ಬಾಳ್ಳರ್ ತಮ್ಮನ ಜೊತೆ ಫೋನ್ ನಲ್ಲಿ ಮಾತನಾಡಿದೆ. ಗಂಭೀರ ಗಾಯಗಳಾಗಿಲ್ಲ. ಸ್ವಲ್ಪ ಆತಂಕಕ್ಕೆ ಒಳಗಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಳರ್ ಜೊತೆ ಜೊತೆ ಮಾತನಾಡಲು ಆಗಿಲ್ಲ. ಕಾರು ಜಖಂ ಆಗಿದೆ. ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.