Gl harusha
ಅಪರಾಧ

ಬಂಟ್ವಾಳ: ಬೈಕ್ ಗಳ ನಡುವೆ ಅಪಘಾತ; ಬಾಲಕಿ ಮೃತ್ಯು!

ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

srk ladders
Pashupathi
Muliya

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ.

ಬೈಕ್‌ ಸವಾರ ಬಾಲಕಿಯ ತಂದೆ ಅಬ್ದುಲ್ ರಹಮಾನ್ ಕೂಡ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ.ರೋಡ್ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದ್ದು ರಂಜಿತ್ ಗೆ ಕೂಡ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts