ಅತ್ತಾವರ ಐವರಿ ಟವರ್ ನಿವಾಸಿಯಾಗಿದ್ದ ಶರೀಫ್ ಅವರ ಪುತ್ರ ಶಹೀಮ್ (20) ಆಟವಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಈತ ಬುಧವಾರ ಸಂಜೆ ಗೆಳೆಯರ ಜತೆ ಶಟಲ್ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಅಷ್ಟರಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅಲೋಶಿಯಸ್ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದಾರೆ.