Gl jewellers
ಅಪರಾಧ

ಉಳ್ಳಾಲದಲ್ಲಿ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ! ಸಿಎಂ ಬಂದೋಬಸ್ತಿನಲ್ಲಿದ್ದ ಪೊಲೀಸರು: ಇದನ್ನೇ ಬಂಡವಾಳ ಮಾಡಿಕೊಂಡರೇ ದುಷ್ಕರ್ಮಿಗಳು?

Karpady sri subhramanya
ಮಂಗಳೂರು ಸಮೀಪದ ಉಳ್ಳಾಲದಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್ನ ಕೋಟೆಕಾರು ಬ್ಯಾಂಕ್ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಮಂಗಳೂರು: ಮಂಗಳೂರು ಸಮೀಪದ ಉಳ್ಳಾಲದಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್ನ ಕೋಟೆಕಾರು ಬ್ಯಾಂಕ್ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

Akshaya College

ಹಾಡಹಗಲೇ ಬ್ಯಾಂಕ್​ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್​​ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಹಣ, ಚಿನ್ನಾಭರಣದೊಂದಿಗೆ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಪೊಲೀಸರೆಲ್ಲ ಸಿಎಂ ಭದ್ರತೆಗೆ ತೆರಳಿದ್ದಾಗ ಘಟನೆ
ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಬ್ಯಾಂಕ್​ಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಳ್ಳಾಲವು ಯುಟಿ ಖಾದರ್ ಅವರ ವಿಧಾನಸಭಾ ಕ್ಷೇತ್ರವಾಗಿದೆ.

ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ: ಯುಟಿ ಖಾದರ್:

ಬ್ಯಾಂಕ್ ದರೋಡೆ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಕೆಸಿ ರೋಡ್ನ ಕೋಟೆಕಾರು ಬ್ಯಾಂಕ್ನಲ್ಲಿ ಚಿನ್ನಾಭರಣ, ನಗದು ದರೋಡೆಯಾಗಿದೆ. ತಲ್ವಾರ್, ಗನ್ನಿಂದ ಬೆದರಿಸಿ ಬ್ಯಾಂಕ್ ದರೋಡೆ ಮಾಡಿದ ಮಾಹಿತಿ ದೊರೆತಿದೆ. ಜನಸಂದಣಿ ಕಡಿಮೆ ಇರುವ ಸಮಯದಲ್ಲೇ ದರೋಡೆ ನಡೆಸಿದ್ದಾರೆ. ಆರೋಪಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಜಿಲ್ಲಾಡಳಿತದಿಂದ ಪೊಲೀಸರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಖಾದರ್ ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts