ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ.ಮೃತರನ್ನು ವೆಂಕಟೇಶ್ ಮೂರ್ತಿ (28 ) ಮತ್ತು ಮೋಕ್ಷಿತಾ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮಹಿಳೆ ಹಾಗೂ ಇಬ್ಬರು ಮಕ್ಕಳೊಂದಿಗೆ ವೆಂಕಟೇಶ್ ಅವರು ದೊಡ್ಡಹಳ್ಳಾಪುರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು.
ಈ ವೇಳೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಪಿಎಸ್‌ಆರ್‌ಟಿಸಿ) ಬಸ್ ದ್ವಿಚಕ್ರ ವಾಹನವನ್ನು ಓವರ್‌ಟೇಕ್ ಮಾಡುವ ವೇಳೆ ಹ್ಯಾಂಡಲ್‌ಗೆ ಸ್ಪರ್ಶಿಸಿದೆ. ಈ ವೇಳೆ ಮೂರ್ತಿ ಅವರ ವಾಹನ ನಿಯಂತ್ರಣ ತಪ್ಪಿದ್ದು, ನಾಲ್ವರೂ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ సిలుశి ಮೂರ್ತಿಯವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬಾಲಕಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆಂದು ತಿಳಿದುಬಂದಿದೆ.